ಹಾಸನ: ರಜೆ ಇದೆ ಎಂಬ ಕಾರಣಕ್ಕೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಸಾವನ್ನಪ್ಪಿದ ದುರ್ದೈವಿಗಳು.
ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ತೆರಳಿದ್ದಾಗ ಈ ಘಟನೆ ನಡೆದಿದೆ. 12.30 ಸುಮಾರಿಗೆ ಘಟನೆ ನಡೆದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.