ಮೇಕೆ ಹಾಗೂ ಪಾರಿವಾಳ ಕದ್ದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ದಲಿತ ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ನಾಲ್ವರು ದಲಿತರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಆರು ಜನ ಸೇರಿಕೊಂಡು ದೊಣ್ಣೆಗಳಿಂದ ಥಳಿಸಿರುವ ಘಟನೆ ನಡೆದಿದೆ. ಶ್ರೀರಾಂಪುರ ತಾಲೂಕಿನ ಹರೇಗಾಂವ್ ಗ್ರಾಮದಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಅಲ್ಲದೇ, ಐವರು ತಲೆಮರೆಸಿಕೊಂಡಿದ್ದಾರೆ ಎಂದು ಅಹ್ಮದ್ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.