ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ನಾಲ್ಕು ದಿನ ಲಾಕ್ ಡೌನ್ Chikkaballapur
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಮತ್ತೆ ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕೋವಿಡ್ ನಿಯಂತ್ರಿಸಲು ಮೇ 27 ರಿಂದ 30ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯನ್ನು ಸಂಫೂರ್ಣ ಬಂದ್ ಮಾಡಲಾಗುತ್ತದೆ.
ಅಗತ್ಯ ವಸ್ತುಗಳ ಖರೀದಿಗೆ ಮೂರು ದಿನ ಅವಕಾಶ ಕಲ್ಪಿಸಲಾಗಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸಿ ಖರೀದಿಸುವಂತೆ ಜನರಲ್ಲಿ ಮನವಿ ಮಾಡಿದರು.
ಇನ್ನು ಇದೇ ವೇಳೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ವ್ಯಾಪಾರ ವಹಿವಾಟು ಮಾಡುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮನವಿ ಮಾಡಿಕೊಂಡರು.