ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊನೆಗೂ 4 ದಿನಗಳ ಬಳಿಕ ಸಾರಿಗೆ ಮುಷ್ಕರ ಅಂತ್ಯ, ಕೋಡಿಹಳ್ಳಿ ಚಂದ್ರಶೇಖರ್ ಅಧಿಕೃತ ಘೋಷಣೆ

Kariyappa N by Kariyappa N
December 14, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

                                   ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 3 ತಿಂಗಳ ಡೆಡ್‍ಲೈನ್
ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದೇ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನಿಗಮಗಳ ನೌಕರರು ಆರಂಭಿಸಿದ್ದ ಮುಷ್ಕರ ನಾಲ್ಕು ದಿನಗಳ ಬಳಿಕ ಅಂತ್ಯಗೊಂಡಿದೆ.
ಸಾರಿಗೆ ನೌಕರರ 10 ಬೇಡಿಕೆಗಳ ಪೈಕಿ ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಮುಖ ಬೇಡಿಕೆ ಹೊರತುಪಡಿಸಿ 9 ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರ್ಕಾರ ಲಿಖಿತ ಭರವಸೆ ನೀಡಿದೆ. ಈ ಲಿಖಿತ ಭರವಸೆಯನ್ನು 3 ತಿಂಗಳ ಒಳಗೆ ಈಡೇರಿಸುವಂತೆ ಡೆಡ್‍ಲೈನ್ ನೀಡಿ ಮುಷ್ಕರ ಅಂತ್ಯಗೊಳಿಸಲಾಗಿದೆ. ನಾಲ್ಕು ದಿನಗಳ ಬಳಿಕ ಸಾರಿಗೆ ಮುಷ್ಕರ ಅಂತ್ಯಗೊಳಿಸಲಾಗಿದ್ದು, ಇಂದು ಹಾಗೂ ನಾಳೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ನಾಳೆಯಿಂದ ಪೂರ್ಣಪ್ರಮಾಣದಲ್ಲಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಫ್ರೀಡಂಪಾರ್ಕ್‍ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅಧಿಕೃತ ಘೋಷಣೆ ಮಾಡಿದ್ದಾರೆ.


ನಿನ್ನೆಯೂ ಸಹ ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಾರಿಗೆ ಮುಷ್ಕರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ಮೆಜೆಸ್ಟಿಕ್ ಸೇರಿ ಕೆಲವೆಡೆ ಬಸ್ ಸಂಚಾರವೂ ಆರಂಭವಾಗಿತ್ತು. ಆದರೆ, ಸವದಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡಿದ್ದ ನೌಕರರು, ಫ್ರೀಡಂಪಾರ್ಕ್‍ಗೆ ತೆರಳಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ಜತೆ ಚರ್ಚಿಸಿದ ಬಳಿಕ ಮುಷ್ಕರ ಮುಂದುವರೆಸಲಾಗುವುದು ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಯಾಗಿತ್ತು.
ಪ್ರಯಾಣಿಕರ ಹಿತದೃಷ್ಟಿಯಿಂದ ಸಾರಿಗೆ ಮುಷ್ಕರ ಹಿಂಪಡೆಯಲು ಚಿಂತನೆ ನಡೆದಿದೆ ಎಂದು ಇಂದು ಬೆಳಿಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಸುಳಿವು ನೀಡಿದ್ದರು. ಈ ಸಂಬಂಧ ಫ್ರೀಡಂಪಾರ್ಕಿನಲ್ಲಿ ಸತ್ಯಾಗ್ರಹ ನಡೆಸುತ್ತಿರುವ ನೌಕರರ ಜತೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದರು.
ಕೋಡಿಹಳ್ಳಿ ಚಂದ್ರಶೇಖರ್ ಫ್ರೀಡಂಪಾರ್ಕ್‍ಗೆ ತೆರಳಿದ ಬಳಿಕ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಬೇಕೆಂದು ನೌಕರರು ಪಟ್ಟು ಹಿಡಿದರು. 10 ಬೇಡಿಕೆಗಳ ಪೈಕಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಹೊರತುಪಡಿಸಿ 9 ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡಿತು. ಆದರೂ. ಗೊಂದಲ ಮುಂದುವರೆಯಿತು.

Related posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

August 12, 2026
depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026


ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಜಾರಿ ಮಾಡುವ ನೀಡುವ ಭರವಸೆಯನ್ನು ಖುದ್ದು ಡಿಸಿಎಂ ಲಕ್ಷ್ಮಣ್ ಸವದಿ ಫ್ರೀಡಂಪಾರ್ಕ್‍ಗೆ ಬಂದು ನೀಡುವಂತೆ ಪಟ್ಟುಹಿಡಿದರು. ಆದರೆ, ಸರ್ಕಾರದ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ 3 ತಿಂಗಳ ಗಡುವು ನೀಡಿ 4 ದಿನಗಳ ಬಳಿಕ ಮುಷ್ಕರ ಅಂತ್ಯಗೊಳಿಸಲಾಯಿತು. ತಮ್ಮ ಪ್ರಮುಖ ಬೇಡಿಕೆಯಾದ ಸರ್ಕಾರಿ ನೌಕರರೆಂದು ಪರಿಗಣಿಸುವ ಬೇಡಿಕೆಯಿಂದ ಹಿಂದೆ ಸರಿಯದಂತೆ ಪ್ರತಿಭಟನಾನಿರತ ನೌಕರರು ಪಟ್ಟು ಹಿಡಿದರು. ಆದರೆ, ಸರ್ಕಾರಕ್ಕೆ 3 ತಿಂಗಳ ಗಡುವು ನೀಡೋಣ, ಪ್ರಯಾಣಿಕರ ಹಿತದೃಷ್ಟಿಯಿಂದ ಮುಷ್ಕರ ವಾಪಸ್ ಪಡೆಯೋಣ. ಸರ್ಕಾರ ಬೇಡಿಕೆ ಈಡೇರಿಸದೇ ನಿರ್ಲಕ್ಷ್ಯ ವಹಿಸಿದರೆ ಮತ್ತೆ ಹೋರಾಟ ಮಾಡುವ ಎಚ್ಚರಿಕೆ ನೀಡೋಣ ಎಂದು ಹೇಳುವ ಮೂಲಕ ಸಾರಿಗೆ ನೌಕರರ ಮುಷ್ಕರ ಅಂತ್ಯಗೊಂಡಿದೆ ಎಂದು ಸಾರಿಗೆ ನೌಕರರ ಹೋರಾಟದ ನೇತೃತ್ವ ವಹಿಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅಧಿಕೃತ ಘೋಷಣೆ ಮಾಡಿದರು.

 

 

ಇದರೊಂದಿಗೆ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯಗೊಂಡಿದ್ದು, ಮೆಜೆಸ್ಟಿಕ್‍ನಿಂದ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಿಂದಲೂ ಸರ್ಕಾರಿ ಬಸ್ ಸಂಚಾರ ಆರಂಭವಾಗಿದೆ. ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಸಾರಿಗೆ ನೌಕರರು ತಿಳಿಸಿದ್ದಾರೆ.

ಸರ್ಕಾರ ನೀಡಿದ 9 ಭರವಸೆಗಳು
1. ಸಾರಿಗೆ ನಿಗಮಗಳ ನೌಕರರಿಗೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಿಸು ತೀರ್ಮಾನ
2. ಕೋವಿಡ್‍ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ಆರೋಗ್ಯ ಸಂಜೀವಿನಿ ವಿಮಾ ಯೋಜನೆಯಡಿ 30 ಲಕ್ಷ ಪರಿಹಾರ
3. ಸಾರಿಗೆ ನೌಕರರನ್ನೂ 6ನೇ ವೇತನ ಆಯೋಗದ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡಿದ್ದು, ಆರ್ಥಿಕ ಅಂಶಗಳನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ತೀರ್ಮಾನ.
4. ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ ಸಂದರ್ಭ 2020ರ ಜನವರಿಯಿಂದ ಸ್ಥಗಿತಗೊಂಡಿದ್ದ ಭತ್ಯೆ(ಬಾಟಾ) ಆರಂಭ
5. ಅಂತರ್ ನಿಗಮ ವರ್ಗಾವಣೆಗೆ ಸೂಕ್ತ ನೀತಿ ರಚನೆಗೆ ಒಪ್ಪಿಗೆ
6. ಮೇಲಧಿಕಾರಿಗಳ ಕಿರುಕುಳ ತಡೆಗೆ ಸಮಿತಿ ರಚಿಸುಸವುದು ಸೇರಿ ಆಡಳಿತ ವ್ಯವಸ್ಥೆ ರೂಪಿಸಲು ತೀರ್ಮಾನ
7. ಸಿಬ್ಬಂದಿಯ ತರಬೇತಿ ಅವಧಿ 2 ವರ್ಷದಿಂದ 1 ವರ್ಷಕ್ಕೆ ಇಳಿಸಲು ತೀರ್ಮಾನ
8. ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಮಾನವ ಸಂಪನ್ಮೂಲ ವ್ಯವಸ್ಥೆ ಜಾರಿಗೆ ಸಮ್ಮತಿ
9. ಎನ್‍ಐಎನ್‍ಸಿ (ನಾಟ್ ಇಶ್ಯೂಡ್-ನಾಟ್ ಕಲೆಕ್ಟೆಡ್) ಪದ್ದತಿ ಬದಲಾಗಿ ಪರ್ಯಾಯ ವ್ಯವಸ್ಥೆ ಜಾರಿ ಮಾಡಲು ರಾಜ್ಯ ಸರ್ಕಾರ ಲಿಖಿತ ಒಪ್ಪಿಗೆ ನೀಡಿದೆ.

ರಾಜ್ಯ ಸರ್ಕಾರದ ಲಿಖಿತ ಭರವಸೆ ಮೇರೆಗೆ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ, ಸರ್ಕಾರ ಕೊಟ್ಟ ಭರವಸೆಯಂತೆ ನಡೆದುಕೊಳ್ಳುತ್ತಾ, ಮಾತು ಮರೆತು ಭರವಸೆ ನೀಡದೆ ನಿರ್ಲಕ್ಷ್ಯ ಧೋರಣೆ ತಳೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 4 day after endB S YADIYURAPPAfreedom park strikekodihalli chandrashekarKSRTClakshman savadimbtctransport wokers strike
ShareTweetSendShare
Join us on:

Related Posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram