ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಸಾಧ್ಯತೆ…
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಕಾರವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಿತ್ತು.
ಇಂದು ಮಧ್ಯ ಕರ್ನಾಟಕದ ಬಯಲುಸೀಮೆ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 20 (ನಾಳೆ) ಬಯಲು ಸೀಮೆಯ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹೊರತು ಪಡಿಸಿ ಉಳಿದೆಲ್ಲ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ, ಇಂದು ಕರಾವಳಿ ಭಾಗ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. 20, 21 ಮತ್ತು 22 ರಂದು ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ನಾಳೆ ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಅವರು ಮಾಹಿತಿ ನೀಡಿದ್ದಾರೆ.
22 ರಂದು ಗದಗ ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ತುಮಕೂರು ಸೇರಿದಂತೆ ಇಂದು ಮಳೆ ಬರುವ ಸಾಧ್ಯತೆ ಇದೆ. ಪರಿಣಾಮ ವಾತಾವರಣದ ಗರಿಷ್ಠ ಉಷ್ಣಾಂಶದಲ್ಲಿ ಏರುಪೇರಾಗಲಿದೆ ಎಂದು ಮಾಹಿತಿ ನೀಡಿದರು.