ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡರನ್ನು ಪೊಲೀಸರು ಬಂಧಿಸಿದ್ದು, ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಅವರ ಮೇಲಿದೆ. ಹೀಗಾಗಿ ಸೋನು ಅವರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ಹೆಚ್ಚಿನ ವಿವರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ಸೋಮವಾರ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಹೀಗಾಗಿ ನ್ಯಾಯಾಲಯ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಬಾಲಕಿ ಪರಿಚಯವಾಗಿದ್ದ ಸ್ಥಳ ಮತ್ತು ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.
ಕೆಲವು ತಿಂಗಳ ಹಿಂದೆ ಸೋನು ಶ್ರೀನಿವಾಸ್ ಗೌಡ ಅವರು ಹೆಣ್ಣು ಮಗು ದತ್ತು ಪಡೆದಿದ್ದೇನೆಂದು ಹೇಳಿಕೊಂಡಿದ್ದರು. ದತ್ತು ಪ್ರಕ್ರಿಯೆಯ ಕಾನೂನನ್ನು ಪಾಲಿಸಿಲ್ಲ ಎಂಬುದು ತಿಳಿದು ಬಂದ ನಂತರ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಪೊಲೀಸರು ಬಂಧಿಸಿದ್ದರು. 7 ವರ್ಷದ ಬಾಲಕಿಯ ಜೊತೆ ಸೋನು ಗೌಡ ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.