ಟ್ರಕ್ ಗಳ ನಡುವೆ ಡಿಕ್ಕಿ : ನಾಲ್ವರು ಸಾವು
ರಾಜಸ್ಥಾನ : ಟ್ರಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಚಾಲಕ ಸೇರಿದಂತೆ ನಾಲ್ವರು ಸಜೀವ ದಹನವಾಗಿರುವ ಘಟನೆ ಅಜ್ಮೇರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ನಡೆದಿದೆ.
ಮೃತರ ಪೈಕಿ ಚಾಲಕನ ಗುರುತು ಪತ್ತೆಯಾಗಿದ್ದು, ಆತನ ಕುಟುಂಬಕ್ಕೆ ಮಾಹಿತಿ ರವಾನಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಹಚ್ಚಬೇಕಿದೆ.
ಇನ್ನು ರಸ್ತೆಯಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬೆಂಕಿಯನ್ನು ನಂದಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಚಾಲಕಕನ ನಿಯಂತ್ರಣ ತಪ್ಪಿ ಟ್ರಕ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇನ್ನೊಂದು ಟ್ರಕ್ ಕೂಡ ಡಿಕ್ಕಿ ಹೊಡೆದಿದ್ದು, ಬೆಂಕಿ ಹೊತ್ತಿಕೊಂಡಿದೆ.









