ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ
ಚಿಕ್ಕಮಗಳೂರು : ಒಂದೇ ಕುಟುಂಬದ ನಾಲ್ವರು ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಮಳಲಿ ಚನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಳೇಜೇಡಿಕಟ್ಟೆ ಗ್ರಾಮದ ಮಂಜು, ನೀತು, ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ ಆತ್ಮಹತ್ಯೆಗೆ ಯತ್ನಿಸಿದವರು ಎಂದು ಗುರುತಿಸಲಾಗಿದೆ.
ಸ್ವಿಫ್ಟ್ ಕಾರು ಭದ್ರಾ ನಾಲೆಗೆ ಬಿದ್ದ ಬಳಿಕ ನೀತು ಹಾಗೂ ಮಗು ಧ್ಯಾನ್ ಸಾವಿನಿಂದ ಪಾರಾಗಿದ್ದಾರೆ.
ಆದರೆ ಮಂಜು ಹಾಗೂ ಮಂಜು ತಾಯಿ ಸುನಂದಮ್ಮ ಪತ್ತೆಯಾಗಿಲ್ಲ. ಸದ್ಯ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.









