ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.
ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಹತ್ತಿರದ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಮುಗಿಯುತ್ತಿದ್ದಂತೆ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ಪರೀಕ್ಷೆ ಬರೆದ ನಂತರ ಈಜಲು ತೆರಳಿದ್ದ ನಾಲ್ವಕು ನದಿಯಲ್ಲಿ ಮುಳುಗಿ ಶವವಾಗಿ ಸತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು.
ಮೃತ ವಿದ್ಯಾರ್ಥಿಗಳು ಸುರತ್ಕಲ್ ಪಟ್ಟಣದ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದರು. ಅಲ್ಲದೇ, ಪೂರ್ವಸಿದ್ಧತಾ ಪರೀಕ್ಷೆಗೂ ಹಾಜರಾಗಿದ್ದರು. ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಹೀಗಾಗಿ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸದ್ಯ ವಿದ್ಯಾರ್ಥಿಗಳ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.