ಚಿನ್ನದನಾಡಿನ ಜನರನ್ನು ಬಿಟ್ಟುಬಿಡದೇ ಕಾಡುತ್ತಿದೆ ಮಳೆ

1 min read
holiday for school-colleges tomorrow in Kolar saaksha tv

ಚಿನ್ನದನಾಡಿನ ಜನರನ್ನು ಬಿಟ್ಟುಬಿಡದೇ ಕಾಡುತ್ತಿದೆ ಮಳೆ

ಕೋಲಾರ : ಅಕಾಲಿಕ ಮಳೆಗೆ ಚಿನ್ನದನಾಡು ಕೋಲಾರದ ಜನರು ಹೈರಾಣಾಗಿದ್ದಾರೆ.

ಈ ಬಾರಿ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಈ ಮಧ್ಯೆ ಮುಂದಿನ 5 ದಿನಗಳ ಕಾಲ ಜೋರು ಮಳೆಯಾಗುವ ಸಾಧ್ಯತೆಗಳಿಗೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ದೀಪಾವಳಿ ಹಬ್ಬದ ಬಳಿಕ ಮಳೆ ಆಗುವುದು ತೀರಾ ಅಪರೂಪ. ಆದ್ರೆ ಈ ಬಾರಿ ದೀಪಾವಳಿ ಬಳಿಕವೂ ರಾಜ್ಯದಾದ್ಯಂತ ಮಳೆಯಾಗುತ್ತಿದೆ.

kolara saaksha tv

ಅದರಲ್ಲೂ ಕೋಲಾರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಈಗಾಗಲೇ ಹವಾಮಾನ ಇಲಾಖೆ ಇನ್ನೂ ಐದು ದಿನಗಳ ಕಾಲ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಿದ್ದು, 24 ಗಂಟೆಗಳ ಕಾಲ ಕಂಟ್ರೋಲ್ ರೂಂ ತೆರೆಯುವಂತೆ ಕೋಲಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಅಲ್ಲದೆ ತಹಶೀಲ್ದಾರ್, ಉಪ ತಹಶೀಲ್ದಾರ್, ಗ್ರಾಮ ಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd