ವಿಜಯಪುರ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಾತ್ರೆಗೆಂದು ತೆರಳಿದ್ದ ನಾಲ್ವರು ಯುವಕರು ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದಿದ್ದರಿಂದಾಗಿ ಈ ಘಟನೆ ನಡೆದಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಅಲ್ಲದೇ, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಅನಿಲ ಖೈನೂರ (23), ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಸಾವನ್ನಪ್ಪಿರುವ ದುರ್ದೈವಿಗಳು.
ಶಾಹಿದ ಹುನಗುಂದ, ಪ್ರಶಾಂತ ಕುರುಬಗೌಡರ, ಹನಮಂತ ಕರುಬಗೌಡರಗೆ ಗಂಭಿರ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








