ಮಂಗಳೂರು: ಮನೆಯ ಗೋಡೆ ಕುಸಿದ ಪರಿಣಾಮ ಮನೆ ಬಿದ್ದು ನಾಲ್ವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. ಮೃತರನ್ನು ಯಾಸಿರ್(45), ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ವ್ಯಾಪಕ ಮಳೆಯಾದ ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದಿದೆ. ಅವಶೇಷಗಳಡಿ ಮನೆಯೊಳಗಿದ್ದ ನಾಲ್ವರು ಮೃತಟ್ಟಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.