ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇಂದು ನಾಲ್ವರು ಬಲಿಯಾಗಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಕಳೆದ 24 ಗಂಟೆಗಳಲ್ಲಿ 298 ಜನರಿಗೆ ಕೊರನಾ ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರು (Bengaluru) ನಗರದಲ್ಲಿ ಇಬ್ಬರು, ಧಾರವಾಡ ಹಾಗೂ ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇದೇ ಅವಧಿಯಲ್ಲಿ 7,791 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 298 ಜನರಲ್ಲಿ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದಲ್ಲಿಯೇ 172 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 1,240 ಸಕ್ರೀಯ ಕೇಸ್‍ಗಳಿದ್ದು, 1,168 ಜನರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. 72 ಜನರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಐಸಿಯುನಲ್ಲಿದ್ದರೆ, ಮೂವರು ಐಸಿಯು ಜೊತೆ ವೆಂಟಿಲೇಟರ್ ಸಪೋರ್ಟ್‍ನಲ್ಲಿದ್ದಾರೆ. ಇಂದು ಬೆಂಗಳೂರು ಹೊರತು ಪಡಿಸಿದರೆ, ಹಾಸನದಲ್ಲಿ 19 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಮೈಸೂರು 18, ದಕ್ಷಿಣ ಕನ್ನಡ ಹಾಗೂ ಮಂಡ್ಯದಲ್ಲಿ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.








