ಮೈಸೂರು: ಮುಂದಿನ ನಾಲ್ಕೈದು ವಾರದಲ್ಲಿ ಹೆಮ್ಮಾರಿ ಕೊರೊನಾಗೆ ಲಸಿಕೆ ಸಿಗುವ ಸಾಧ್ಯತೆ ಇದ್ದು, ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ಕೊರೊನಾ ಲಸಿಕೆ ಹಾಗೂ ಕೋವಿಡ್ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜತೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದ್ದಾರೆ.
ಕೊರೊನಾಗೆ ಸದ್ಯದಲ್ಲೇ ಲಸಿಕೆ ಲಭ್ಯವಾಗಲಿದೆ. ಇದಕ್ಕೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ನೀವೂ ಸಹ ಅಗತ್ಯ ಕಾನೂನುಗಳನ್ನು ಮಾಡಿ ಲಸಿಕೆ ಹಂಚಿಕೆಗೆ ಕ್ರಮಕೈಗೊಳ್ಳಿ ಎಂದಿದ್ದಾರೆ. ಪ್ರತಿಯೊಂದು ಜಿಲ್ಲೆಯಲ್ಲೂ ಲಸಿಕೆ ಹಂಚಿಕೆಗೆ ಸರಿಯಾದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದ್ದಾರೆ. ಜತೆಗೆ ಕೊರೊನಾದಿಂದ ಯಾವುದೇ ತೊಂದರೆ ಆಗದಂತೆ ಕಟ್ಟೆಚ್ಚರ ವಹಿಸುವಂತೆ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮೈಸೂರಿನಲ್ಲಿ ತಿಳಿಸಿದ್ದಾರೆ.
ನಂತರ ಮೈಸೂರು ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡ ಹಾಗೂ ಪೊಲೀಸ್ ಗೃಹ-2020 ಯೋಜನೆಯಡಿ 108 ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಮತ್ತಿತರರು ಭಾಗವಹಿಸಿದ್ದರು.

ಇದೇ ವೇಳೆ, RBI ಪೇಪರ್ ಮಿಲ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿರುವ 75 ಲಕ್ಷ ರೂ.ಗಳ ಚೆಕ್‍ನ್ನು ಯಡಿಯೂರಪ್ಪ ಸ್ವೀಕರಿಸಿದರು.

ಆರ್.ಬಿ.ಐ. ಪೇಪರ್ ಮಿಲ್ ನ ವ್ಯವಸ್ಥಾಪಕ ನಿರ್ದೇಶಕ ಕೆ. ಜಿ. ವಿಶ್ವನಾಥನ್, ವ್ಯವಸ್ಥಾಪಕರಾದ ಎ. ಆರ್. ಹೆಗಡೆ, ಧರಣಿ ಕುಮಾರ್, ಕಾರ್ಯದರ್ಶಿ ಲಕ್ಷ್ಮೀಶ ಬಾಬು ಉಪಸ್ಥಿತರಿದ್ದರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








