ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ ಕಾರ್ಯಾಚರಣೆ ಆರಂಭಿಸುವ ಗುರಿ ಇಟ್ಟುಕೊಂಡಿದೆ.
ಈ ಹಿನ್ನೆಲೆಯಲ್ಲಿ ಪಿಂಕ್ ಲೈನ್‌ಗಾಗಿ ನಾಲ್ಕನೇ ರೈಲು ಸೆಟ್ ಭಾನುವಾರ ನಗರಕ್ಕೆ ಬಂದಿಳಿದಿದೆ. 6 ಕೋಚ್‌ಗಳನ್ನು ಹೊಂದಿರುವ ಈ ಹೊಸ ರೈಲು ಸೆಟ್ ಅನ್ನು ಮಾರ್ಚ್ 13ರಂದು BEML ಲಿಮಿಟೆಡ್ ಸಂಸ್ಥೆಯ ಹೊಸ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋ ಗೆ ಸಾಗಿಸಲಾಗಿದೆ.
ಪಿಂಕ್ ಲೈನ್ ಮೆಟ್ರೋ ಯೋಜನೆ ನಮ್ಮ ಮೆಟ್ರೋ ವಿಸ್ತರಣೆಯ ಪ್ರಮುಖ ಹಂತವಾಗಿದ್ದು, ನಗರದ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿರೀಕ್ಷೆಯಿದೆ.
ಈ ಹೊಸ ರೈಲು ಸೆಟ್ ಮೇಲೆ ಅಗತ್ಯ ಪರೀಕ್ಷೆಗಳು ಮತ್ತು ಅನುಮತಿ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಸಾರ್ವಜನಿಕ ಸೇವೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








