ಡ್ರೋನ್ ಪ್ರತಾಪ್ ವಿರುದ್ಧ ಈಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗಿದೆ.
ಬಿಗ್ ಬಾಸ್ ನಲ್ಲಿ ರನ್ನರ್ ಆಪ್ ಆಗಿರುವ ಪ್ರತಾಪ್, ಅಲ್ಲಿಗೆ ಹೋಗುವ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದರು. ಆನಂತರ ಮುಗ್ಧದತೆ ತೋರಿಸಿ ರನ್ನರ್ ಅಪ್ ಆಗಿದ್ದರು. ಈಗ ಅವರ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಿವೆ.
ಮಾಜಿ ಸಿಎಂ ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬರಿಂದ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ್ದಾರೆ ಎನ್ನಲಾಗುತ್ತಿದೆ. ಜಿಪಂ ಚುನಾವಣೆ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಎರಡು ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ಚಂದನ್ ಗೌಡ ಎಂಬ ವ್ಯಕ್ತಿ ದೂರು ದಾಖಲಿಸಿದ್ದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಪಂ ಟಿಕೆಟ್ ಕೊಡಿಸುತ್ತೇನೆ ಎಂದು ನಂಬಿಸಿದ್ದರು ಎಂದು ಚಂದನ್ ದೂರಿನಲ್ಲಿ ಹೇಳಿದ್ದಾರೆ. ಈ ಕುರಿತ ಆಡಿಯೋ ಸಹ ಚಂದನ್ ಗೌಡ ಬಿಡುಗಡೆ ಮಾಡಿದ್ದಾರೆ.
ಪ್ರತಾಪ್, ಬಿಗ್ಬಾಸ್ನಿಂದ ಹೊರಬಂದ ನಂತರ ಚಂದನ್ ಗೌಡ ಸಾಕಷ್ಟು ಬಾರಿ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಉದ್ಯಮಿ ಸಾರಂಗ್, ಪ್ರತಾಪ್ 35 ಲಕ್ಷ ರೂ. ಪಡೆದು ಒಪ್ಪಂದದ ಅನುಗುಣವಾಗಿ ಡ್ರೋನ್ ನೀಡಿಲ್ಲ. ಕೆಲವು ಕಾರ್ಯವನ್ನೇ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಪ್ರತಾಪ್ ವಿರುದ್ಧ ಈಗಾಗಲೇ ಎರಡು ದೂರುಗಳು ದಾಖಲಾಗಿವೆ. ಬಿಬಿಎಂಪಿ ಮಾಜಿ ನೂಡಲ್ ಅಧಿಕಾರಿ ಪ್ರಯಾಗ್, 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಪ್ರತಾಪ್, ಸೂಕ್ತ ಅನುಮತಿಗಳನ್ನು ಪಡೆಯದೆ ಡ್ರೋನ್ ಮಾರಾಟ ಮಾಡುತ್ತಿದ್ದು, ಕ್ರಮ ಕೈಗೊಳ್ಳುವಂತೆ ಮಹೇಶ ದೂರು ದಾಖಲಿಸಿದ್ದಾರೆ.