ವೆಬ್ ಸರಣಿ ಎಂದು ನಂಬಿಸಿ ಚಿತ್ರೀಕರಣ : ಮಾಡೆಲ್ ವಿಡಿಯೋ ಪೋರ್ನ್ ಸೈಟಲ್ಲಿ ರಿಲೀಸ್
ಮುಂಬೈ: ಸಿನಿಮಾದಲ್ಲಿ ಚಾನ್ಸ್ ಕೊಡಿಸೋದಾಗಿ , ವೆಬ್ ಸೀರೀಸ್ ಗಳಲ್ಲಿ ನಟನೆಗೆ ಅವಕಾಶಗಳನ್ನ ಕೊಡಿಸೋದಾಗಿ ಯುವತಿಯರು , ಮಾಡೆಲ್ ಗಳನ್ನ ವಂಚಿಸುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗ್ತಲೇ ಇವೆ.. ಈ ರೀತಿಯಾದ ಪ್ರಕರಣಗಳು ಹೆಚ್ಚಾಗ್ತಲೇ ಇದ್ರು ಯುವತಿಯರು , ಹೊಸ ಪ್ರತಿಭೆಗಳು ತಮ್ಮ ಕನಸು ನನಸಾಗಿಸಿಕೊಳ್ಳುವ ಉತ್ಸಾಹದಲ್ಲಿ ಮೋಸದ ಜಾಲಕ್ಕೆ ಸಿಲುಕಿ ವಂಚನೆಗೆ ಒಳಗಾಗ್ತಾರೆ. ಇಂತಹದ್ದೇ ಒಂದು ಪ್ರಕರಣ ಮುಂಬೈನಲ್ಲಿ ಬೆಳಕಿಗೆ ಬಂದಿವೆ.
ಹೌದು.. ಮಾಡೆಲ್ ಒಬ್ಬರನ್ನು ವೆಬ್ ಸಿರೀಸ್ ಎಂದು ನಂಬಿಸಿ ನಿಕಟ ದೃಶ್ಯಗಳನ್ನು ಚಿತ್ರೀಕರಿಸಿ ಪೋರ್ನ್ ಸೈಟಲ್ಲಿ ಬಿಡುಗಡೆ ಮಾಡಿರುವ ಪ್ರಕರಣ ಮುಂಬೈನಲ್ಲಿ ಬೆಳಕಿಗೆ ಬಂದಿದೆ. 24 ವರ್ಷದ ಮಾಡೆಲ್ ಕೊಟ್ಟ ದೂರಿನನ್ವಯ ನಾಲ್ವರು ಅಪರಿಚಿತರ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ. ವೆಬ್ ಸಿರೀಸ್ ಎಂದು ಚಿತ್ರೀಕರಣ ನಡೆಸಲಾಗಿತ್ತು. ಆದರೆ, ಇದೀಗ ಆ ದೃಶ್ಯಗಳು ಪೋರ್ನ್ ವೆಬ್ ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ಅವರು ದೂರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ವರ್ಷದ ಮಾರ್ಚ್‌ನಲ್ಲಿ ಮಲಾಡ್ ಬಳಿಯ ಮಾಧ್ ದ್ವೀಪದಲ್ಲಿ ವೆಬ್ ಸರಣಿಗೆ ಎಂದು ಹೇಳಿ ಕೆಲವು ನಿಕಟ ದೃಶ್ಯಗಳನ್ನು ಆರೋಪಿಗಳು ಚಿತ್ರೀಕರಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಆ ದೃಶ್ಯಗಳು ಪೋರ್ನ್ ಸೈಟಲ್ಲಿ ಇವೆ ಎಂದು ಮಹಿಳೆ ದೂರು ನೀಡಿದ್ದಾರೆ. ಈ ಸಂಬಂಧ ನಾಲ್ವರು ವಂಚಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.