ಚಿತ್ರದುರ್ಗ: ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಕೋಟಿಗಟ್ಟಲೇ ಹಣ ವಂಚನೆ ಮಾಡಿರುವ ಘಟನೆಯೊಂದು ನಡೆದಿದೆ.
ಅಷ್ಟೇ ಅಲ್ಲದೇ, 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಯುವತಿಗೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಚಿತ್ರದುರ್ಗ ಮೂಲದ ಸೌರಭ್ ಎಂಬಾತ ಪರಿಚಯವಾಗಿದ್ದ. ಆನಂತರ ಆತ ಸ್ನೇಹಿತನ ರೀತಿಯಲ್ಲಿ ಆತ್ಮೀಯತೆ ಬೆಳೆಸಿಕೊಂಡಿದ್ದ. ಅಮೆರಿಕ ಸೇರಿದಂತೆ ವಿದೇಶದನ ಮಲ್ಟಿನ್ಯಾಷನಲ್ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದಾನೆ ಎನ್ನಲಾಗಿದೆ.
ಪ್ರತಿದಿನ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಆರೋಪಿ, ಹೊರ ದೇಶಕ್ಕೆ ಹೋಗಬೇಕು, ರೆಡಿಯಾಗಿರು ಎಂದು ಹೇಳಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಇತ್ತೀಚೆಗೆ ಆತನ ಮೇಲೆ ಸಂಶಯಗೊಂಡು ಹಣ ಮರಳಿ ಕೇಳಿದ್ದಾರೆ. ಎರಡೂವರೆ ಕೋಟಿ ರೂ. ಹಣ ಮರಳಿ ನೀಡುವಂತೆ ಅಂಗಲಾಚಿದರೂ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.








