ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ದಂಪತಿ, ಹಲವರನ್ನು ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿಯನ್ನು ಪ್ರಕಾಶ್ ಹಾಗೂ ಮಧು ಎಂದು ಗರುತಿಸಲಾಗಿದೆ. ದೊಡ್ಡ ದೊಡ್ಡ ವ್ಯಕ್ತಿಗಳು, ವಿವಿಧ ಇಲಾಖೆಗಳ ಮುಖ್ಯಸ್ಥರು ನಮಗೆ ಗೊತ್ತು. ಅವರಿಂದ ನಾವು ಕೆಲಸ ಕೊಡಿಸುತ್ತೇವೆ ಎಂದು ಯುವಕರಿಂದ ಲಕ್ಷಾಂತರ ಹಣ ವಸೂಲಿ ಮಾಡಿದ್ದಾರೆ. ನಂತರ ಕೆಲಸ ಕೊಡಿಸದೆ, ಹಣ ನೀಡದೆ ವಂಚಿಸುತ್ತಿದ್ದರು ಎನ್ನಲಾಗಿದೆ.
ವ್ಯಕ್ತಿಯೊಬ್ಬರು 6 ಲಕ್ಷ ರೂ. ವಂಚಿಸಿದ್ದಾರೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಲಕ್ಷ ರೂ. ನಗದು, 4 ಮೊಬೈಲ್ ಫೋ, ಒಂದು ದ್ವಿಚಕ್ರ ವಾಹನ, 6 ಬ್ಯಾಂಕ್ ಅಕೌಂಟ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ದಂಪತಿ ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎನ್ನಲಾಗಿದೆ.