ಬೆಂಗಳೂರು: ನನ್ನ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ (Bengaluru City Police Commissioner) ದೂರು ನೀಡಿದ್ದಾರೆ.
ಡಿ.ಕೆ ಸುರೇಶ್, ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ. ಐಶ್ವರ್ಯಾ ಗೌಡ (Aishwarya Gowda) ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿವೆ. ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.








