ನವದೆಹಲಿ: ನಾಳೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಹಿನ್ನೆಲೆ ದೇಶದ ಪ್ರಾಚ್ಯವಸ್ತು ಸಂಶೋಧನಾ ಸಂಸ್ಥೆ ಮಹತ್ವ ನಿರ್ಧಾರ ಪ್ರಕಟಿಸಿದ್ದು, ಆರ್ಕಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದಡಿ ಬರುವ ಎಲ್ಲಾ ಐತಿಹಾಸಿಕ ಸ್ಥಳಗಳಲ್ಲಿಯೂ ನಾಳೆ ಮಹಿಳೆಯರಿಗೆ ಉಚಿತ ಪ್ರವೇಶ ಇರಲಿದೆ ಎಂದು ತಿಳಿಸಿದೆ.
ಇನ್ನು ಪ್ರತಿ ವರ್ಷ ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಹ, ಸುಮಾರು 13.5 ಫಾಲೋವರ್ಸ್ ಹೊಂದಿರುವ ತಮ್ಮ ಸಾಮಾಜಿಕ ಜಾಲತಾಣವನ್ನು ಮಹಿಳೆಯರ ಬಳಕೆಗೆ ನೀಡುವುದಾಗಿ ತಿಳಿಸಿದ್ದಾರೆ.
ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...






