ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. 1 ಲಕ್ಷ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಿಎಂಟಿಸಿ ಹಾಗೂ ಕಾರ್ಮಿಕ ಕಲ್ಯಾಣ ಇಲಾಖೆಯ ಜೊತೆಗೂಡಿ ಬೆಂಗಳೂರಿನ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್ ವಿತರಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದೆ ಸಲ್ಲಿಸಿದ್ದರು. ಈ ಯೋಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಮಂಡಿಸಿದ ಬಜೆಟ್ ನಲ್ಲಿ ಅನುಮೋದನೆ ನೀಡಿದ್ದು, ಈ ಮೂಲಕ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಮಹಿಳಾ ಕಾರ್ಮಿಕರಿಗೆ ಈ ವರ್ಷದಿಂದಲೇ ಉಚಿತ ಬಿಎಂಟಿಸಿ ಬಸ್ ಪಾಸ್ ದೊರೆಯಲಿದೆ.
ಪಂಚಮಸಾಲಿ ಪ್ರತಿಭಟನೆ ಗಾಯದ ಮೇಲೆ ‘ಉಪ್ಪು’ ಸವರಿದ CM & ಕಿಚ್ಚು ಹೊತ್ತಿಸಿದ ‘ಪರಂ’..!
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್...