ಬೆಂಗಳೂರು : ಕಾಂಗ್ರೆಸ್ ಸರ್ಕಾರ (Congress Government) 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಅದರಲ್ಲಿ ಒಂದಾಗಿರುವ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಲಿದ್ದಾರೆ. ಮೊದಲ ಬಾರಿಗೆ ಮಹಿಳೆಯರಿಗೆ ರಾಜ್ಯಾದ್ಯಂತ ಬಸ್ ಫ್ರೀ ನೀಡಿದ್ದಾರೆ. ಈ ಯೋಜನೆ ಇಂದಿನಿಂದ ಅಧಿಕೃತವಾಗಿ ಚಾಲನೆಗೊಳ್ಳಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮಹಿಳೆಯರ ಫ್ರೀ ಬಸ್ ಪ್ರಯಾಣಕ್ಕೆ ವೋಟರ್ ಐಡಿ, ರೇಷನ್ ಕಾರ್ಡ್ ಹಾಗೂ ಅಧಾರ್ ಕಾರ್ಡ್ (Adhar card) ಸೇರಿದಂತೆ ಯಾವುದಾರು ಒಂದು ದಾಖಲೆ ಕಡ್ಡಾಯವಾಗಿದೆ. ಈ ವಿಚಾರದಲ್ಲಿ ಪ್ರಯಾಣಿಕರು ಮತ್ತು ಬಸ್ ಸಿಬ್ಬಂದಿ ನಡುವೆ ಕಿರಿಕ್ ಆಗುವ ಸಾಧ್ಯತೆಗಳಿವೆ. ಹೀಗಾಗಿ ಪೊಲೀಸರು ಅಲರ್ಟ್ ಆಗಿದ್ದಾರೆ.
ಒಟ್ಟಾರೆ ಇಂದು 1 ಗಂಟೆಯ ನಂತರ ಮಹಿಳೆಯರು ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್ಗಳಲ್ಲಿ ಉಚಿತವಾಗಿ ಓಡಾಡಬಹುದಾಗಿದೆ.