ಕರ್ನಾಟಕ ರಾಜ್ಯ ಸರ್ಕಾರವು CET, NEET ಮತ್ತು JEE ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವ ಮಹತ್ವದ ನಿರ್ಣಯವನ್ನು ಕೈಗೊಂಡಿದೆ. ಶಾಲಾ ಶಿಕ್ಷಣ ಇಲಾಖೆ ಈ ಮಾಹಿತಿ ಬಿಡುಗಡೆ ಮಾಡಿದ್ದು, ನವೆಂಬರ್ 20, 2024 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಈ ಯೋಜನೆಯ ಅಡಿಯಲ್ಲಿ, ರಾಜ್ಯದ 25,000 ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಉಚಿತ ತರಬೇತಿ ನೀಡಲಾಗುವುದು. ಸರ್ಕಾರದ ಈ ಕ್ರಮವು ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಹಾಯಕವಾಗಲಿದೆ.
ಈ ಉಚಿತ ತರಬೇತಿ ಅನುದಾನ ಯೋಜನೆಯು, ಶಿಕ್ಷಣದ ಸಮಾನ ಅವಕಾಶವನ್ನು ಒದಗಿಸುವ ಮೂಲಕ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳ ಭವಿಷ್ಯದ ಕನಸುಗಳ ಸಾಧನೆಗೆ ಉತ್ತಮ ವೇದಿಕೆಯಾಗಲಿದೆ.








