ಬ್ಲ್ಯಾಕ್ ಫಂಗಸ್ ಗುಣಮುಖವಾಗುವವರೆಗೂ ಉಚಿತ ಚಿಕಿತ್ಸೆ : ಸಿಎಂ ಬೊಮ್ಮಾಯಿ black-fungus saaksha tv
ಬೆಂಗಳೂರು : ಬ್ಲ್ಯಾಕ್ ಫಂಗಸ್ ಚಿಕಿತ್ಸೆಯು ದುಬಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಅವರ ಎಲ್ಲಾ ಖರ್ಚನ್ನು ಸರ್ಕಾರವೇ ವಹಿಸಿಕೊಳ್ಳಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಯು ದುಬಾರಿಯಾಗಿದ್ದು, ಪ್ರತಿ ಇಂಜೆಕ್ಷನಗ ಗೆ 10,000 ದಿಂದ 12,000 ರೂ. ಆಗುತ್ತದೆ. ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವೂ ನಾಲ್ಕು ವಾರಗಳ ಕಾಲ ಇಂಜೆಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವು ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಘೋಷಿಸಿದರು.
ಇನ್ನು ಕೊರೊನಾ ಮೂರನೇ ಅಲೆ ಬಗ್ಗೆ ಮಾತನಾಡಿ, ಈ ಕುರಿತಂತೆ ತಜ್ಞರ ಸಲಹೆ ಪಡೆದಿದ್ದು, ಮಕ್ಕಳ ಆರೋಗ್ಯಕ್ಕಾಗಿಯೇ ಶಿಬಿರಗಳನ್ನು ಸ್ಥಾಪಿಸಲಾಗುವುದು ಎಂದರು.








