ಮಾರ್ಚ್ 2025ರಿಂದ ಅಪಘಾತಕ್ಕೊಳಗಾದವರ ಚಿಕಿತ್ಸೆಗೆ 1.5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೆ ತರುತ್ತಿದೆ. ಈ ಯೋಜನೆಯಡಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೂ ಈ ನಿಯಮ ಕಡ್ಡಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಶಾದ್ಯಂತ ಜಾರಿಯಾಗುವ ಮಹತ್ವದ ಯೋಜನೆ
ಈ ಹೊಸ ಕ್ರಮ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಯಾಗಲಿದ್ದು, ರಸ್ತೆ ಅಪಘಾತಗಳಲ್ಲಿ ತೀವ್ರವಾಗಿ ಗಾಯಗೊಂಡವರ ತಕ್ಷಣದ ಚಿಕಿತ್ಸೆಗಾಗಿ NHAI (National Highways Authority of India) ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದೆ.
ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿ
ಈ ಯೋಜನೆಯನ್ನು ಅನುಷ್ಠಾನಗೊಳಿಸಲು 1988ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 162 ಅನ್ನು ತಿದ್ದುಪಡಿ ಮಾಡಲಾಗಿದೆ. ಇದು ಯಾವುದೇ ಆರ್ಥಿಕ ಪರಿಸ್ಥಿತಿಯ ಲೆಕ್ಕಾಚಾರವಿಲ್ಲದೆ ರಸ್ತೆ ಅಪಘಾತ ಪೀಡಿತರಿಗೆ ತಕ್ಷಣದ ಚಿಕಿತ್ಸೆ ನೀಡುವಂತೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಕಾನೂನುಬದ್ಧ ಆದೇಶ ನೀಡುತ್ತದೆ.
ರೋಗಿಗಳಿಗೆ ತ್ವರಿತ ಚಿಕಿತ್ಸೆ – ಸಾವಿನ ಪ್ರಮಾಣ ತಗ್ಗಿಸುವ ಪ್ರಯತ್ನ
ಈ ಕ್ರಮದಿಂದಾಗಿ ಅಪಘಾತಕ್ಕೊಳಗಾದ ವ್ಯಕ್ತಿಗಳಿಗೆ ತಕ್ಷಣ ಚಿಕಿತ್ಸೆ ದೊರೆಯುವುದು ಸುಗಮವಾಗಲಿದ್ದು, ಗಂಭೀರ ಗಾಯಗಳಾಗಿದರೂ ಮೊದಲು ಹಣ ಪಾವತಿ ಮಾಡುವ ಅಗತ್ಯವಿಲ್ಲ. ಇದು ಅಪಘಾತದಿಂದ ಸಾವಿನ ಪ್ರಮಾಣ ತಗ್ಗಿಸುವತ್ತ ಸರ್ಕಾರದ ಮಹತ್ವದ ಹೆಜ್ಜೆಯಾಗಲಿದೆ.
ಸಾರಿಗೆ ಸಚಿವಾಲಯದ ಮಹತ್ವದ ನಿರ್ಧಾರ
ಸಾರಿಗೆ ಸಚಿವಾಲಯ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಎಲ್ಲಾ ರಾಜ್ಯ ಸರ್ಕಾರಗಳ ಸಹಕಾರವನ್ನು ಪಡೆಯಲು ನಿರ್ಧರಿಸಿದ್ದು, ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಸೂಕ್ತ ತುರ್ತು ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲು NHAI ಮುಂದಾಗಿದೆ.
ಈ ಯೋಜನೆ ಅನೇಕ ಅಪಘಾತ ಪೀಡಿತರಿಗೆ ಜೀವ ರಕ್ಷಕವಾಗಿ ಪರಿಣಮಿಸಲಿದೆ ಮತ್ತು ತಕ್ಷಣದ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ!