ಕೇಂದ್ರದಿಂದ ಉಚಿತ ವ್ಯಾಕ್ಸಿನ್ ಘೋಷಣೆ – ನವೆಂಬರ್ ವರೆಗೆ ಬಡವರಿಗೆ ಉಚಿತ ಧಾನ್ಯ ಪೂರೈಕೆ
ದೇಶದಲ್ಲಿ ವ್ಯಾಪಕವಾಗಿ ಹರಡಿರುವ ಕೋವಿಡ್ -19 ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಹೆಚ್ಚಿನ ರಾಜ್ಯಗಳು ಕೇಂದ್ರದಿಂದಲೇ ವ್ಯಾಕ್ಸಿನ್ ಪೂರೈಕೆ ಮಾಡುವಂತೆ ಕೇಳಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಕೋವಿಡ್ ಲಸಿಕೆಗಳನ್ನು ಖರೀದಿಸುವ ಜವಾಬ್ದಾರಿಯನ್ನು ಕೇಂದ್ರವು ವಹಿಸಲಿದೆ ಎಂದು ಪ್ರಧಾನಿ ಘೋಷಿಸಿದರು.

ಕೋವಿಡ್ ಲಸಿಕೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಭ್ಯವಿರುತ್ತದೆ. ಪಾವತಿಸಿ ಲಸಿಕೆ ಪಡೆಯ ಬಯಸುವವರು ಅದನ್ನು ಖಾಸಗಿ ಕೇಂದ್ರಗಳಲ್ಲಿ ಪಡೆಯಬಹುದು. ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಶುಲ್ಕ 150 ರೂ ಸರ್ವೀಸ್ ಚಾರ್ಜ್ ಮಾತ್ರ ಪಾವತಿಸಿ ಲಸಿಕೆ ಪಡೆಯಬಹುದು. ವ್ಯಾಕ್ಸಿನ್ ತಯಾರಿಕಾ ಸಂಸ್ಥೆಗಳಿಂದ ಕೇಂದ್ರವೇ ವ್ಯಾಕ್ಸಿನ್ ಖರೀದಿ ಮಾಡಲಿದ್ದು, ಜೂನ್ 21 ರಿಂದ ಎಲ್ಲ ವಯೋಮಾನದವರಿಗೂ ಉಚಿತ ಲಸಿಕೆ ಲಭ್ಯವಿರುತ್ತದೆ ಎಂದು ಪ್ರಧಾನಿ ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತೆ ಮೂರು ವ್ಯಾಕ್ಸಿನ್ ಲಭ್ಯವಾಗುವ ಸಾಧ್ಯತೆಯಿದ್ದು, ಮೂರು ಲಸಿಕೆಗಳ ಅಡ್ವಾನ್ಸ್ ಕ್ಲಿನಿಕಲ್ ಟ್ರಯಲ್ ಸಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಜೂನ್ 21 ಅಂತರಾಷ್ಟ್ರೀಯ ಯೋಗ ದಿನದಿಂದ ವ್ಯಾಕ್ಸಿನ್ ಅಭಿಯಾನ ಪ್ರಾರಂಭವಾಗಲಿದೆ ಎಂದು ಪ್ರಧಾನಿ ಹೇಳಿದರು.
ಬಡವರಿಗೆ ಆಹಾರ ಧಾನ್ಯ ಒದಗಿಸಲು ಪ್ರಧಾನಿ ಗರೀಬ್ ಕಲ್ಯಾಣ್ ಯೋಜನೆ ದೀಪಾವಳಿಯವರೆಗೆ ಮುಂದುವರಿಯುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದರು. ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವಲ್ಲಿ ಆಡಳಿತದ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ, ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸುವುದು ಈ ಅದೃಶ್ಯ ಮತ್ತು ರೂಪಾಂತರಿತ ಶತ್ರುವನ್ನು ಸೋಲಿಸುವ ಮಾರ್ಗವಾಗಿದೆ ಎಂದು ಹೇಳಿದರು.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಹುರಿದ ಬೆಳ್ಳುಳ್ಳಿಯ ಆರೋಗ್ಯ ಪ್ರಯೋಜನಗಳು#Saakshatv #healthtips #roasted #garlic #healthbenefits https://t.co/C9lCBxQJ3y
— Saaksha TV (@SaakshaTv) June 3, 2021
ಮೊಬೈಲ್ ಸಂಖ್ಯೆ ಇಲ್ಲದೆ ಆಧಾರ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ – ಇಲ್ಲಿದೆ ಮಾಹಿತಿ#downloading #Aadharcard #mobilenumber https://t.co/79EGc6GX8x
— Saaksha TV (@SaakshaTv) June 4, 2021
ಬಟಾಟೆ ಬೋಂಡಾ#Saakshatv #cookingrecipe #potatobonda https://t.co/ast7rcwKwU
— Saaksha TV (@SaakshaTv) June 3, 2021
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು 8 ಆಯುರ್ವೇದ ಮಾರ್ಗಗಳು#Saakshatv #healthtips #Ayurvedic #boost #immunity https://t.co/hOqFKguVJR
— Saaksha TV (@SaakshaTv) June 4, 2021
#Freevaccination








