SSLC Exam ಮೇ 24ರಿಂದ ಪಿಯುಸಿ, ಜೂ. 20ರಿಂದ ಎಸ್ಎಸ್ಎಲ್ಸಿ ಪರೀಕ್ಷೆ
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮೇ 24 ರಿಂದ ಪಿಯುಸಿ, ಜೂನ್ 20 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 24 ರಿಂದ ಪಿಯುಸಿ, ಜೂನ್ 20 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳು ಸುರಕ್ಷತಾ ಕೇಂದ್ರಗಳು ಆಗಿರುತ್ತೆ. ಎಸ್ಎಸ್ಎಲ್ಸಿಗೆ 8,75,798 ಜನ ವಿದ್ಯಾರ್ಥಿಗಳ ನೋಂದಣಿಯಾಗಿದೆ. ಪಿಯುಸಿಗೆ 7,01,651 ಮಂದಿ ವಿದ್ಯಾರ್ಥಿಗಳನ್ನು ನೋಂದಣಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಕೊರೊನಾ ಮಧ್ಯೆಯೂ ಪರೀಕ್ಷೆ ನಡೆಸುವುದು ನಮ್ಮ ಕರ್ತವ್ಯ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ನಿಜವಾದ ಕೊರೊನಾ ವಾರಿಯರ್ಸ್ ಎಂದ ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುವುದು ಎಂದು ತಿಳಿಸಿದರು.










