ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮುಂಗಾರು ಹಂಗಾಮಿನ ಬೆಳೆಗಳಿಗೆ ಇಂದು ಮಧ್ಯರಾತ್ರಿಯಿಂದಲೇ ಕಾಲುವೆಗಳಲ್ಲಿ ನೀರನ್ನು ಹರಿಸಲಾಗುವುದು. ಭದ್ರಾ ಡ್ಯಾಂನಿಂದ ಬಲದಂಡೆ ನಾಲೆಗೆ ನೀರು ಹರಿಸಲಿರುವ ಹಿನ್ನೆಲೆ ನಾಲೆಯ ಪಾತ್ರಗಳಲ್ಲಿರುವ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತಿಳಿಸಿದೆ.
ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು, 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಇಂದು ಮಧ್ಯರಾತ್ರಿಯಿಂದ ಭದ್ರಾ ಬಲದಂಡೆ ನಾಲೆ, ಎಡದಂಡೆ ನಾಲೆಗಳಲ್ಲಿ ನೀರು ಹರಿಸಲಾಗುವುದು ಸೂಚನೆ ನಿಡಿದೆ. ಹೀಗಾಗಿ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ಸುಳಿದಾಡುವುದು, ಜಾನುವಾರಗಳನ್ನು ತೊಳೆಯುವುದನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದೆ.








