ನವದೆಹಲಿ: ದೇಶದಲ್ಲಿ ಲೋಕಸಭೆಯ ಕಾವು ಜೋರಾಗಿದ್ದು, ಕಾಂಗ್ರೆಸ್ ನ ಮೊದಲ ಪಟ್ಟಿ ಕೂಡ ಬಿಡುಗಡೆಯಾಗಿದೆ. ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ದೊಡ್ಮನೆ ಸೊಸೆಗೆ ಟಿಕೆಟ್ ಸಿಕ್ಕಿದೆ.
ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ಶಶಿ ತರೂರ್ ಸೇರಿದಂತೆ ಒಟ್ಟು 9 ರಾಜ್ಯಗಳ 39 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಟಿಕೆಟ್ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿ.ಕೆ ಸುರೇಶ್ ಮತ್ತೊಮ್ಮೆ ಕಣಕ್ಕೆ ಇಳಿಯಲಿದ್ದಾರೆ.
ವಿಜಯಪುರ (SC) – ಹೆಚ್.ಆರ್. ಅಲ್ಗೂರು (ರಾಜು), ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ, ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್, ಹಾಸನ – ಎಂ. ಶ್ರೇಯಸ್ ಪಟೇಲ್, ತುಮಕೂರು – ಎಸ್.ಪಿ ಮುದ್ದಹನುಮೇಗೌಡ, ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು), ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ ಟಿಕೆಟ್ ಪಡೆದಿದ್ದಾರೆ.