ಸತತ 7ನೇ ದಿನವೂ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ
ನವದೆಹಲಿ: ಸತತ 7 ದಿನಗಳಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದ್ದು, ಮಂಗಳವಾರ ಪೆಟ್ರೋಲ್ 80 ಪೈಸೆ ಡಿಸೇಲ್ 70 ಪೈಸೆ ಏರಿಕೆಯಾಗಿದೆ.
ಇನ್ನೂ ಕಳೆದ ಒಂದು ವಾರದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಲೀಟರ್ ಗೆ 4.80 ರೂ ಏರಿಕೆಯಾಗಿದೆ. ಉದ್ಯಾನವನ ನಗರಿ ಬೆಂಗಳೂರಿನಲ್ಲಿ 104.76 ರೂ. ಇದ್ದ ಪೆಟ್ರೋಲ್ ದರ 105.62 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 89 ರೂ. ಇದ್ದ ಡೀಸೆಲ್ ದರ ರೂ. 89.70ಗೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ. 100.21 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.91.47 ದಾಖಲಾಗಿದೆ. ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 85 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 75 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ. ಪೆಟ್ರೋಲ್ ದರ ರೂ. 115.04, ಡೀಸೆಲ್ ರೂ.99.25 ದಾಖಲಾಗಿದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಲೀಟರ್ಗೆ ಪೆಟ್ರೋಲ್ ಬೆಲೆ 113.61ರೂ ಹಾಗೂ ಡೀಸೆಲ್ಗೆ 99.84ರೂ. ದಾಖಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.