ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ Fuel prices
ನವದೆಹಲಿ: ದೇಶದಲ್ಲಿ ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.
ಈ ಬೆಲೆ ಏರಿಕೆಯಾಗುವುದರೊಂದಿಗೆ ದೇಶಾದ್ಯಂತ ಬಹುತೇಕ ಎಲ್ಲ ಭಾಗದಲ್ಲಿ ಪೆಟ್ರೋಲ್ ದರ ಶತಕದ ಗಡಿ ದಾಟಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 100.91 ರೂ., ಡೀಸೆಲ್ 89.88 ರೂ.
ಕೊಲ್ಕತ್ತಾದಲ್ಲಿ ಪೆಟ್ರೋಲ್ 101.01 ರೂ., ಡೀಸೆಲ್ 92.97 ರೂ. ಮುಂಬೈನಲ್ಲಿ ಪೆಟ್ರೋಲ್ 106.93 ರೂ., ಡೀಸೆಲ್ 97.46 ರೂ ನಷ್ಟಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರು ಪೆಟ್ರೋಲ್ 104.29 ರೂ., ಡೀಸೆಲ್ 95.26 ರೂ ರಷ್ಟಾಗಿದೆ.