ವಿಜಯಪುರ: ರೈತರ ಟ್ರ್ಯಾಕ್ಟರ್ ಮೆರವಣಿಗೆ ವೇಳೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ ನಡೆದ ಗಲಭೆ ಹಾಗೂ ಹಿಂಸಾಚಾರ ನಡೆಸಲು ಪಾಕಿಸ್ತಾನ ಹಾಗೂ ಚೀನಾದಿಂದ ಫಂಡಿಂಗ್ ಆಗಿದೆ. ಜತೆಗೆ ಕಾಂಗ್ರೆಸ್, ಆಪ್ ಹಾಗೂ ಕಮ್ಯುನಿಸ್ಟ್ ಪಕ್ಷಗಳಿಂದ ಪಂಡಿಂಗ್ ಆಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.


ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ರೈತರ ಭವಿಷ್ಯದ ದೃಷ್ಟಿಯಿಂದ ಮೂರು ಕೃಷಿ ಕಾಯ್ದೆಗಳು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ. ಆದ್ರೆ ಈ ಕಾಯ್ದೆಗಳನ್ನು ಜಾರಿ ತರದಂತೆ ಮಾಡಲು ಕೆಲವರು ಲಾಭಿ ಮಾಡುತ್ತಿದ್ದಾರೆ. ಇದರಲ್ಲಿ ಕಾಂಗ್ರೆಸ್, ಆಮ್ ಆದ್ಮಿ, ಕಮ್ಯೂನಿಸ್ಟ್ ನವರು ಷಡ್ಯಂತ್ರವಿದೆ ಎಂದು ಕಿಡಿಕಾರಿದ್ದಾರೆ.
ಕೆಂಪುಕೋಟೆ ಮೇಲೆ ಬೇರೆ ಬೇರೆ ಧ್ವಜ ಹಾರಿಸಿದ್ದು ಖಂಡನೀಯ, ಅಂತವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಕೆಡಿಸಲು ದೇಶವಿರೋಧಿ ಶಕ್ತಿಗಳು ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿವೆ ಎಂದು ದೂರಿದ್ದಾರೆ.
ಮುಂದಿನ 20 ವರ್ಷ ನರೇಂದ್ರ ಮೋದಿಯೇ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ತಾವು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹತಾಶರಾಗಿರುವ ಕಾಂಗ್ರೆಸ್, ಕಮ್ಯುನಿಷ್ಟರು ದೆಹಲಿಯ ರೈತರ ಪ್ರತಿಭಟನೆ ವೇಳೆ ಗಲಭೆ ಮಾಡಿಸಿದ್ದಾರೆ. ಈ ಬಗ್ಗೆ ಗುಪ್ತಚರ ಇಲಾಖೆಗೆ ಮೊದಲೇ ಮಾಹಿತಿ ಇತ್ತು. ಆದರೆ, ಸುಪ್ರೀಂ ಕೋರ್ಟ್ ಟ್ರ್ಯಾಕ್ಟರ್ ಜಾತಾ ನಡೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪೆÇಲೀಸರು ಕೈಕಟ್ಟುವಂತಾಯಿತು ಎಂದು ಯತ್ನಾಳ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








