ಡಿಕೆಶಿ ಬಳಿ ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕರ ಪಟ್ಟಿ : ಪರಮೇಶ್ವರ್
ತುಮಕೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಳಿ ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕರ ಪಟ್ಟಿ ಇದೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಅನ್ನುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಸಚಿವ ಸಂಪುಟ ಪುನಾರಚನೆ ಬಳಿಕ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆ ಆಗಲಿದೆ. ಅದು ಯಾವ ರೀತಿಯ ಬೆಳವಣಿಗೆಯೂ ಆಗಬಹುದು. ಸಚಿವ ಸ್ಥಾನ ಸಿಗದಿದ್ದಾಗ ಪಕ್ಷ ಬಿಟ್ಟು ಹೋಗೋರು ಇದ್ದಾರೆ.
ಕಾಂಗ್ರೆಸ್ ಸೇರಲು ಬಿಜೆಪಿಯ ಹಲವು ಶಾಸಕರು- ಸಚಿವರು ತಯಾರಿದ್ದಾರೆ. ಬಿಜೆಪಿಗೆ ವಲಸೆ ಹೋದವರು, ಮೂಲ ಬಿಜೆಪಿಯವರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬಳಿ ಕಾಂಗ್ರೆಸ್ ಗೆ ಸೇರುವವರ ಪಟ್ಟಿ ಇದೆ. ತುಮಕೂರು ಜಿಲ್ಲೆಯಲ್ಲಿ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.
ಇತ್ತ ಕಾಂಗ್ರೆಸ್ ನಾಯಕರು ಪದೇ ಪದೇ ಇಂತಹ ಹೇಳಿಕೆಗಳನ್ನು ನೀಡಿದ್ದು, ಈ ಮಾತುಗಳನ್ನು ಬಿಜೆಪಿ ನಾಯಕರು ಅಲ್ಲಗೆಳೆಯುತ್ತಿದ್ದಾರೆ.