ಜೆಡಿಎಸ್ ತೊರೆಯುವ ಬಗ್ಗೆ ಜಿ.ಟಿ.ದೇವೇಗೌಡ ಸ್ಪಷ್ಟನೆ
ಮೈಸೂರು : ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಪದೇ ಪದೇ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಲೇ ಇರುತ್ತವೆ. ಈ ಬಗ್ಗೆ ಇಂದು ಸ್ವತಃ ಜಿಟಿಡಿ ಸ್ಪಷ್ಟನೆ ನೀಡಿದ್ದು, ಪಕ್ಷ ಬಿಡುವ ಮಾತೇ ಇಲ್ಲ ಎಂದಿದ್ದಾರೆ.
ದೇವೇಗೌಡರು ಮೈಸೂರು ಸಮೀಪದ ಉದ್ಭೂರು ಗ್ರಾಮದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ : ಕೋಡಿಮಠ ಶ್ರೀ ಭವಿಷ್ಯ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನು ಪಕ್ಷ ಬಿಡುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ.
ನಾನು ಜಾತ್ಯತೀತ ಜನತಾ ದಳ ಪಕ್ಷದ ಶಾಸಕನಾಗಿದ್ದೇನೆ. ಪಕ್ಷ ಬಿಡುವ ಮಾತೇ ಇಲ್ಲ. ಎರಡು ವರ್ಷ ಜೆಡಿಎಸ್ ಶಾಸಕನಾಗಿಯೇ ಅವಧಿಮುಗಿಸುತ್ತೇನೆ.
ಮುಂದಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಇನ್ನು ಮುಂದಿನ ಚುನಾವಣೆ ಹೊತ್ತಿಗೆ ಜೆಡಿಎಸ್ ಹೇಗಿರುತ್ತದೆ? ಬಿಜೆಪಿ ಹೆಂಗಿರುತ್ತದೆ? ಕಾಂಗ್ರೆಸ್ ಹೇಗಿರುತ್ತದೆ ಎನ್ನುವುದನ್ನು ನೋಡುತ್ತೇನೆ.
ಶಿವಾಜಿ ಮಹಾರಾಜರು ಕೂಡ ಕನ್ನಡಿಗರೇ : ಗೋವಿಂದ ಕಾರಜೋಳ
ಕ್ಷೇತ್ರದ ಜನರೊಂದಿಗೆ ಸಮಾಲೋಚನೆ ನಡೆಸಿ, ಮುಂದಿನ ರಾಜಕೀಯ ತೀರ್ಮಾನ ಮಾಡುತ್ತೇನೆ. ಈಗ ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದು ಪಕ್ಷ ಬಿಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷಾತೀತವಾಗಿ ನಡೆಯಬೇಕು.
ಬಿಜೆಪಿಯವರು ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ರಾಜಕಾರಣ ಮಾಡುತ್ತೇವೆ ಅಂತಾರೆ. ಕಾಂಗ್ರೆಸ್ ನವರು ನಾವು ಗೆಲ್ಲುತ್ತೇವೆ ಅಂತ ಹೇಳುತ್ತಾರೆ.
ನಾನು ಜನ ಸೇವೆ ಮಾಡುವವರು ಯಾರಿದ್ದಾರೆ ಎಂಬುದನ್ನು ಗುರುತಿಸಿ ಆಯ್ಕೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel