ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ , ಯೋಗರಾಜ್ ಭಟ್ ಅವರ ಕ್ರೇಜಿ ಕಾಂಬಿನೇಷನ್ ನ ಗಾಳಿಪಟ 2 ಸಿನಿಮಾ ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಸಿನಿಮಾಗಳ ಪೈಕಿ ಒಂದು ಈ ಸಿನಿಮಾ ಶೀಘ್ರದಲ್ಲೇ ರಿಲೀಸ್ ಆಗಲಿದೆ..
ಈ ಸಿನಿಮಾ ಮತ್ತೊಂದು ಹಾಡು ಈಗ ರಿಲೀಸ್ ಆಗಿ ಸೌಂಡ್ ಮಾಡ್ತಿದೆ..
ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ ಹಾಡು” ಎಂಬ ಹಾಡು ಇತ್ತೀಚೆಗೆ ರಿಲೀಸ್ ಆಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ನಿಹಾಲ್ ತಾವ್ರೋ ಹಾಡಿದ್ದಾರೆ.
ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.
ಆಗಸ್ಟ್ 12 ಕ್ಕೆ ಚಿತ್ರ ತೆರೆಗೆ ಬರಲಿದೆ.
ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾರಾವ್ ಮುಂತಾದವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ..








