Gadaga | ಚಾಕು ಇರಿದು ಯುವಕನ ಕೊಲೆ
ಗದಗ : ಯುವಕರ ಗಲಾಟೆ ವೇಳೆ ಚಾಕು ಇರಿತಕ್ಕೆ ಯುವಕ ಮೃತಪಟ್ಟಿರುವ ಘಟನೆ ಗದಗನ ತೋಂಟದಾರ್ಯ ಮಠದ ಬಳಿ ನಡೆದಿದೆ.
27 ವರ್ಷದ ಸುದೀಪ್ ಮೃತ ದುರ್ದೈವಿಯಾಗಿದ್ದಾರೆ.
ಆದಿತ್ಯ ಮುತಗಾರ ಹಾಗೂ ಐದಾರು ಜನ ಸ್ನೇಹಿತರು ಸುದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಹೊಟ್ಟೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಲಾಗಿದೆ.
ತೀವ್ರ ರಕ್ತಸ್ರಾವದಿಂದ ಅಸ್ವಸ್ಥರಾಗಿದ್ದ ಸುದೀಪ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗದಗ ಶಹರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Gadag A young man was stabbed to death








