Gadaga | ಮಳೆಗೆ ಸೇತುವೆ ಮುಳುಗಡೆ – ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ
ಗದಗ : ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಅದರಂತೆ ಗದಗ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ಇದರಿಂದ ನಾನಾ ಅನಾಹುತಗಳು ಸೃಷ್ಠಿಯಾಗಿವೆ. ಈ ನಡುವೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಟ ನಡೆಸುವಂತೆ ಆಗಿದೆ.
ಈ ಗ್ರಾಮದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಅಪಾಯಕಾರಿ ಹಳ್ಳಗಳನ್ನು ದಾಟಿ ಮುಂದೆ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರಿ ಮಳೆಗೆ ಹಳ್ಳದ ಸೇತುವೆ ಮುಳುಗಡೆಯಾಗಿದೆ. ಆದ್ರೂ ಶಿಕ್ಷಣಕ್ಕಾಗಿ ಜೀವದ ಹಂಗು ತೊರೆದು ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದಾರೆ.
ಅಂದಹಾಗೆ ಹಳ್ಳಕ್ಕೆ ದೊಡ್ಡ ಸೇತುವೆಯನ್ನ ಕಟ್ಟಲು ಶಾಸಕರಿಗೆ, ಸಂಸದರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು.
ಆದ್ರೂ ಕೂಡ ಯಾವುದೇ ಜನಪ್ರತಿನಿಧಿ ಇದಕ್ಕೆ ಸ್ಪಂದಿಸಿಲ್ಲ, ಇದರಿಂದ ಜನರು ಬೇಸತ್ತು ಹೋಗಿದ್ದಾರೆ.