ಗದಗ gadag | ಬೀಜ, ಗೊಬ್ಬರ ಖರೀದಿಗಾಗಿ ಮುಗಿಬಿದ್ದ ರೈತರು
ಗದಗ : ಜಿಲ್ಲೆಯಲ್ಲಿ 2 ದಿನ ಲಾಕ್ ಡೌನ್ ಸಡಿಲಿಕೆ ಮತ್ತು ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಅನೇಕ ಕಡೆಗಳಲ್ಲಿ ಬೀಜ, ಗೊಬ್ಬರ ಖರೀದಿಗಾಗಿ ಮುಗಿಬಿದ್ದಿದ್ದಾರೆ.
ಈಗಾಗಲೇ ಬಿದ್ದಿರುವ ಮಳೆಯಿಂದಾಗಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.
ಇದರಿಂದ ಗದಗ, ಲಕ್ಷ್ಮೇಶ್ವರ, ಗಜೇಂದ್ರಗಡ ಪಟ್ಟಣಗಳಲ್ಲಿ ಬೀಜ, ಗೊಬ್ಬರ ಖರೀದಿಗೆ ರೈತರು ನಾ ಮುಂದು ತಾ ಮುಂದು ಎಂದು ವೇಳೆ ಮಾಸ್ಕ್, ಸಾಮಾಜಿಕ ಅಂತರ ಮರೆತು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ.
ಕೊರೊನಾ ತಡೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗಿದ್ದು, ಇದರಿಂದ ರೈತರಿಗೆ ಗೊಬ್ಬರ ಖರೀದಿಸಲು ಹಿನ್ನೆಡೆಯಾಗಿತ್ತು.
ಇದೀಗ ವಾರದಲ್ಲಿ 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ರೈತರು ತಂಡೋಪತಂಡವಾಗಿ ಆಗಮಿಸಿ ಬೀಜ, ಗೊಬ್ಬರ ಖರೀದಿಸುತ್ತಿದ್ದಾರೆ.