Gadaga Accident : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು…
ಬೈಕ್ ಮತ್ತು ಲಾರಿ ನಡುವೆ ಅಫಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಕನಕಾಪುರ ದ್ಯಾಮವ್ವ ದೇವಿ ದೇವಸ್ಥಾನದ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಜ್ಜು ಗುಜ್ಜಾಗಿದೆ.
ಶಿಗ್ಲಿ ಗ್ರಾಮದ ರಾಜು ಬಸರಿ(41) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಡಾಬ ಮತ್ತು ಹೋಟೆಲ್ ಗಳಿಗೆ ರೊಟ್ಟಿ ಪೂರೈಕೆ ಮಾಡುತ್ತಿದ್ದ ರಾಜು ತಮ್ಮ ಬೈಕ್ ನಲ್ಲಿ ಲಕ್ಷ್ಮೇಶ್ವರದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಲಕ್ಷ್ಮೇಶ್ವರದಿಂದ ಬರುತ್ತಿದ್ದ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಅಪಘಾತ ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೇ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ನಂತರ ಲಾರಿ ಕೂಡ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಗುಂಡಿಗೆ ಇಳಿದಿದ್ದು, ಲಾರಿ ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
Gadaga Accident: Collision between a lorry and a bike – the rider died on the spot…