ವಿರಾಟ್ ಕೊಹ್ಲಿ ಹಾಗೂ ಗಂಭೀರ್ ಮಧ್ಯೆ ಆಗಾಗ ಸಣ್ಣ-ಪುಟ್ಟ ವಿವಾದಗಳು ನಡೆಯುತ್ತಲೇ ಇವೆ. ಹೀಗಾಗಿ ಅಭಿಮಾನಿಗಳು ಕೂಡ ಕಿತ್ತಾಡಿಕೊಳ್ಳುತ್ತಿದ್ದಾರೆ.
ಶ್ರೀಲಂಕಾದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ 2023 ರಲ್ಲಿ ವಿವರಣೆಗಾರರಾಗಿ ಗಂಭೀರ್ ಕಾಣಿಸಿಕೊಂಡಿದ್ದರು. ಸೆಪ್ಟೆಂಬರ್ 4 ರಂದು ಅಂದರೆ ಕಳೆದ ದಿನ ಭಾರತ ಮತ್ತು ನೇಪಾಳ ನಡುವೆ ಪಂದ್ಯ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮಳೆಯಿಂದಾಗಿ ಪಂದ್ಯವನ್ನು ನಿಲ್ಲಿಸಬೇಕಾಯಿತು. ಆಗ ಗೌತಮ್ ಗಂಭೀರ್ ಜನಸಂದಣಿಯ ಮೂಲಕ ಕಾಮೆಂಟೇಟರ್ಸ್ ಬಾಕ್ಸ್ ಕಡೆಗೆ ಸಾಗುತ್ತಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಗಳು ‘ಕೊಹ್ಲಿ-ಕೊಹ್ಲಿ’ ಎಂದು ಘೋಷಣೆಗಳನ್ನು ಕೂಗಲಾರಂಭಿಸಿದರು.
ಈ ಸಂದರ್ಭದಲ್ಲಿ ಗಂಭೀರ್ ಕೋಪದಿಂದ ವಿರಾಟ್ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿದ್ದಾರೆ ಎನ್ನಲಾಗಿದ್ದು, ಇದು ಕೆಟ್ಟ ಸನ್ನೆ ಎಂದು ಪರಿಗಣಿಸಲಾಗುತ್ತಿದೆ. ಹೀಗಾಗಿ ಹಲವರು ಗಂಭೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಇದಕ್ಕೆ ಸ್ಪಷ್ಟನೆ ನೀಡಿರುವ ಗೌತಮ್ ಗಂಭೀರ್, ಆ ಸನ್ನೆ ಮಾಡಿದ್ದು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಅಲ್ಲ ಪಾಕಿಸ್ತಾನಿಗಳಿಗೆ ಎಂದು ಸ್ಪಷ್ಟಪಡಿಸಿದ್ದಾರೆ.