ಗಂಧದ ಗುಡಿ ನೋಡಿ ಮೆಚ್ಚಿಕೊಂಡ ಪ್ರಧಾನಿ ನರೇಂದ್ರ ಮೋದಿ…
ಕರುನಾಡ ರಾಜರತ್ನ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಇದೇ ನೆನಪಿನಲ್ಲಿ ಅಕ್ಟೋಬರ್ 28 ರಂದಿ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯ ಚಿತ್ರವನ್ನ ಬಿಡಗಡೆ ಮಾಡಲಾಗಿದೆ.
ಕರ್ನಾಟಕದ ಸುಂದರ ಪರಿಸವನ್ನ ಅದ್ಭುತವಾಗಿ ತೋರಿಸಲಾಗಿದೆ. ಈಗಾಗಾಲೇ ಸಾಕ್ಷ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಅಪ್ಪು ಅಭಿಮಾನಿಗ ಸಂಭ್ರಮಕ್ಕೆ ಕಾರಣವಾಗಿದೆ ಸಿನಿಮಾ ಮಾತ್ರವಲ್ಲದೇ ರಾಜ ಕಾರಣಿಗಳು ಸಹ ಸಾಕ್ಷ್ಯ ಚಿತ್ರ ನೋಡಿ ಮೆಚ್ಚಿಕೊಂಡಿದ್ದಾರೆ.
ಗಂಧದ ಗುಡಿ ಟ್ರೈಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ ಸಹ ಮೆಚ್ಚಿಕೊಂಡಿದ್ದಾರೆ. “ ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ್ದರು ಮತ್ತು ಅಪ್ರತಿಮ ಪ್ರತಿಭೆಯಿಂದ ಆಶೀರ್ವದಿಸಲ್ಪಟ್ಟಿದ್ದರಿ. ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳು. ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು “ನಿಮ್ಮ ಪ್ರಾಮಾಣಿಕ ಪ್ರೋತ್ಸಾಹ ಮತ್ತು ಶುಭಾಶಯಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದು ಮರು ಟ್ವೀಟ್ ಮಾಡಿದ್ದಾರೆ.
ಗಂಧದಗುಡಿ ಅಪ್ಪು ಹೃದಯಕ್ಕೆ ಹತ್ತಿರ. ಅಪ್ಪು ನಮ್ಮೆಲ್ಲರ ಹೃದಯಕ್ಕೆ ಹತ್ತಿರ. ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ. #GandhadaGudi ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ ಎಂಬ ಭರವಸೆ ಟ್ರೇಲರ್‌ನಲ್ಲಿ ಕಾಣುತ್ತದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ನನ್ನ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
GandhadaGudi : PM Narendra Modi admires Gandhada Gudi…