Ganesha festival | ಬೆಂಗಳೂರು ನಗರದಲ್ಲಿ ಮಾಂಸ ಖರೀದಿ ನಿಷೇಧ
ಬೆಂಗಳೂರು : ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಗಸ್ಟ್ 31 ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಯಲ್ಲಿ ಪ್ರಾಣಿವಧೆ ನಿಷೇಧ ಅನ್ವಯವಾಗಲಿದ್ದು, ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲಿ ಆಗಸ್ಟ್ 31ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಊ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.
ಅಂದಹಾಗೆ ಈ ಹಿಂದೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಲಾಗಿತ್ತು.