ಬೆಂಗಳೂರು : ಇಡೀ ನಗರ ಗಣೇಶ ಹಬ್ಬದ ಸಡಗರದಲ್ಲಿ ಮುಳುಗಿದ್ದ ಹೊತ್ತಲೇ ನಗರದ ಕೆ.ಆರ್ ಪುರಂನಲ್ಲಿ ಗುಂಡಿನ ಸದ್ದು ಕೇಳಿಸಿದೆ.ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿ ಆಗಿದ್ದಾರೆ.
ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10ರ ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ ಆಟೋ ಬಾಬು ಕಚೇರಿಯಲ್ಲಿ ದಾಳಿ ಮಾಡಲಾಗಿದೆ. ಈ ಸಂಬಂಧ ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.