ವಿಜಯಪುರ : ಕೊರೊನಾ ನಿರ್ವಹಣೆಯಲ್ಲಿ ನೂರಕ್ಕೆ ನೂರರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊರೊನಾ ನಿರ್ವಹಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಾವು-ನೋವಿನಲ್ಲೂ ದುಡ್ಡು ಹೊಡೆಯಲಾಗುತ್ತಿದೆ. ವಿರೋಧ ಪಕ್ಷದವರು ಆರೋಪಿಸಿದ್ದು ಸರಿಯಾಗಿದೆ, ಸರ್ಕಾರ ಅವರಿಗೆ ಸಮರ್ಪಕ ದಾಖಲೆ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಕೊರೊನಾ ಸಂದರ್ಭದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆ ಬೇಡ ಎಂಬ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಮುತಾಲಿಕ್, ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಸವಾಲ್ ಹಾಕಿದರು. ಬಾರ್, ಮಾಲ್ ಗಳನ್ನು ತೆರೆಯಲು ಅವಕಾಶ ಕೊಡ್ತಾರೆ, ಗಣಪತಿಗೆ ಏಕೆ ಅವಕಾಶ ಇಲ್ಲ. ನಾವು ಒಂದೇ ಒಂದು ಕೊರೊನಾ ವೈರಸ್ ಹರಡದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಗಣೇಶ ಚತುರ್ಥಿ ಆಚರಿಸುತ್ತೇವೆ ಎನ್ನುವ ಮೂಲಕ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದರು.







