ತಜ್ಞರ ಅಭಿಪ್ರಾಯ ನೋಡಿ ಗಣೇಶೋತ್ಸವ ಆಚರಣೆಗೆ ಅವಕಾಶ : ಸುನಿಲ್ ಕುಮಾರ್
ಉಡುಪಿ : ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಇದೆ. ಆದ್ರೆ ತಜ್ಞರ ಅಭಿಪ್ರಾಯ ನೋಡಿ ಆಚರಣೆಗೆ ಅವಕಾಶ ನೀಡುತ್ತೇವೆ. ಇದನ್ನು ಅರ್ಥ ಮಾಡಿಕೊಂಡು ಜನರು ಸಹಕರಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್ ಕುಮಾರ್, ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಇದೆ. ಸಾರ್ವಜನಿಕರ, ಭಕ್ತ ಜನರ ಬೇಡಿಕೆ ಸರಿಯಾಗಿದೆ.
ಆದರೆ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಮೊದಲ ಆದ್ಯ ಕರ್ತವ್ಯವಾಗಿದೆ. ತಜ್ಞರು ಹೇಳಿರುವ ವಿಚಾರಗಳನ್ನು ಗಮನಿಸಬೇಕು.
ತಜ್ಞರ ಅಭಿಪ್ರಾಯ ನೋಡಿ ಆಚರಣೆಗೆ ಅವಕಾಶ ನೀಡುತ್ತೇವೆ. ಇದನ್ನು ಅರ್ಥ ಮಾಡಿಕೊಂಡು ಜನರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
ಇದೇ ವೇಳೆ ಉಡುಪಿಯಲ್ಲಿ ಶಾಲೆಗಳು ಆರಂಭಿಸುವ ಬಗ್ಗೆ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಿದ ಕಾರಣಕ್ಕೆ ತರಗತಿಗಳು ಆರಂಭವಾಗಿರಲಿಲ್ಲ.
ಈಗ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾರಂಭ ಮಾಡುತ್ತೇವೆ ಎಂದಿದ್ದಾರೆ.









