ಈಗ ಎಲ್ಲೆಲ್ಲೂ ಗಣೇಶೋತ್ವದ ಮೆರವಣಿಗೆ ನಡೆಯುತ್ತಿದೆ. ಡಿಜೆ ಹಾಕಿ ಎಲ್ಲರೂ ಹೆಜ್ಜೆ ಹಾಕುತ್ತಿದ್ದಾರೆ. ಹಲವೆಡೆ ಮಹಿಳೆಯರೂ ಸೇರಿದಂತೆ ಸ್ಟೆಪ್ಸ್ ಹಾಕುತ್ತಿದ್ದಾರೆ. ಹೀಗೆ ಹೆಜ್ಜೆ ಹಾಕುತ್ತಿದ್ದ ವೇಳೆ ಮಹಿಳೆಗೆ ಹೃದಯಾಘಾತವಾಗಿರುವ ಘಟನೆ ನಡೆದಿದೆ.
ಈ ಘಟನೆ ರಾಯಚೂರಿನ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಮಹಿಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕುಸಿದು ಬೀಳುತ್ತಿದ್ದಂತೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅನಂತಮ್ಮ (56) ಸಾವನ್ನಪ್ಪಿದ ಮಹಿಳೆ ಎನ್ನಲಾಗಿದೆ.