ಮಂಡ್ಯ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಗ್ಯಾಂಗ್ ರೇಪ್ ನಡೆದಿರುವ ಈ ಘಟನೆ ಮಂಡ್ಯದ (Mandya) ಮದ್ದೂರು (Maddur) ಪಟ್ಟಣದಲ್ಲಿ ನಡೆದಿದೆ. ಸಹಪಾಠಿಗಳಿಂದಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.
ರೇಪ್ ಮಾಡಿ ನಂತರ ಕಿರಾತಕರು ಅದನ್ನು ವಿಡಿಯೋ ಮಾಡಿದ್ದಾರೆ. ಆದರೆ, ಈ ವೀಡಿಯೋ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪುನೀತ್, ಮಂಜುನಾಥ್ ಹಾಗೂ ಸಿದ್ದರಾಜು ಬಂಧಿತ ಆರೋಪಿಗಳು. ಸದ್ಯ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಎ1 ಆರೋಪಿ ಪುನೀತ್ ಮೈಸೂರಿನ ಯುವ ದಸರಾದಲ್ಲಿ ಸಂತ್ರಸ್ತೆಯ ಪರಿಚಯ ಮಾಡಿಕೊಂಡಿದ್ದ. ಆನಂತರ ಪ್ರೀತಿಯ ನಾಟಕವಾಡಿದ್ದಾನೆ. ಆನಂತರ ನ.4 ರಂದು ಮದ್ದೂರಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನು ವಿಡಿಯೋ ಮಾಡಿ ಯುವತಿಗೆ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಕರೆದಾಗೆಲ್ಲ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಇದರಿಂದ ಭಯಗೊಂಡ ಬಾಲಕಿ ಮನೆಯಲ್ಲಿ ತಿಳಿಸಿದ್ದಾರೆ. ಕೂಡಲೇ ಪೋಷಕರು ದೂರು ನೀಡಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.