13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ Saaksha Tv
ರಾಜಸ್ಥಾನ: 13 ವರ್ಷ ಬಾಲಕಿ ಮೇಲೆ 16 ಜನರು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಭರತ್‍ಪುರದ ರಾಜಸ್ಥಾನದಲ್ಲಿ ನಡೆದಿದೆ.
ಸಂತ್ರಸ್ತೆಯ ತಂದೆ, ಪೊಲೀಸ್ ಠಾಣೆಯಲ್ಲಿ ತನ್ನ ಮಗಳ ಮೇಲೆ 16 ಜನರ ಜನರು ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು, ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವು ಭರತ್‍ಪುರದ ಖೋಹ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಅಪ್ರಾಪ್ತ ಬಾಲಕಿ ಫೆಬ್ರವರಿ 11 ರಂದು ಮಧ್ಯಾಹ್ನ ಮೇಕೆ ಮೇಯಿಸಲು ಮತ್ತು ಕಟ್ಟಿಗೆ ತೆಗೆದುಕೊಳ್ಳಲು ಕಾಡಿಗೆ ಹೋಗಿದ್ದಳು. ಆ ವೇಳೆ ಗ್ರಾಮದ ಐವರು ಬಂದು ಸಂತ್ರಸ್ತೆಯನ್ನು ಅಪಹರಿಸಿದ್ದಾರೆ. ಬಳಿಕ ಬಾಲಕಿ ಮೇಲೆ 16 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಫೆಬ್ರವರಿ 12 ರಂದು ಸಂತ್ರಸ್ತೆ ಅವನ ಹಿಡಿತದಿಂದ ಬಿಡುಗಡೆಗೊಂಡಿದ್ದು, ತನ್ನ ಮನೆಗೆ ಬಂದಿದ್ದಾಳೆ. ನಂತರ ಅವಳು ತನ್ನ ತಂದೆಗೆ ಸಂಪೂರ್ಣ ಕಥೆಯನ್ನು ಹೇಳಿಕೊಂಡಿದ್ದಾಳೆ ಎಂದು ಪೊಲೀಸ್ ರಿಗೆ ನೀಡಿದ ದೂರಿನಲ್ಲಿ ದಾಖಲಾಗಿದೆ.
ಘಟನೆಯ ನಂತರ ಇಡೀ ಪ್ರದೇಶದ ಜನರು ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನ 13 ವರ್ಷದ ಮಗಳನ್ನು ಕೆಲವರು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ 16 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ, ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೀವ್ರ ತನಿಖೆಯನ್ನು ಮಾಡುತ್ತಿದ್ದಾರೆ. ಪ್ರಸ್ತುತ ಐವರು ಆರೋಪಿಗಳೇ ಸ್ವಯಃ ಪ್ರೇರಣೆಯಿಂದ ಪೊಲೀಸ್ ಠಾಣೆಗೆ ಶರಣಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.








