ಜೈಪುರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸಹ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದೆ.
ರಾಜಸ್ಥಾನದ ಕೋಚಿಂಗ್ ಹಬ್ ಕೋಟಾದಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್ಗೆ ಕರೆಯಿಸಿದ್ದ ಸಹ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ಹೇಳಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಮುಖ ಆರೋಪಿಯೊಬ್ಬಾತ ಪರಿಚಯವಾಗಿದ್ದ. ಇದನ್ನೇ ಮುಂದಿಟ್ಟುಕೊಂಡು ಅತ್ಯಾಚಾರ ನಡೆಸಿದ್ದಾರೆ. ಫೆಬ್ರವರಿ 10 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.